ಮುಡಾ ಪ್ರಕರಣ
- ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿರುವ ಹೈಕೋರ್ಟ್, ತನಿಖೆಗೆ ಅಸ್ತು ಎಂದಿದೆ. ಇದರ ಬೆನ್ನಲ್ಲೇ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದಿದ್ದ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಇದ್ದ ತಡೆ ಆದೇಶ ತೆರವುಗೊಂಡಂತಾಗಿದೆ.
- ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗೆ ಕಟಿಸಿದ್ದು, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲ ಯದ ನ್ಯಾಯಿಕ ಪ್ರಕ್ರಿಯೆಗೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿ ಯುವುದಿಲ್ಲ’ ಎಂದು ಸ್ಪಷ್ಟಪಡಿಸಿದೆ.
- ‘ರಾಜ್ಯಪಾಲರ ಆದೇಶವು ವಿವೇಚನಾ ಶೂನ್ಯವಾಗಿಲ್ಲ. ಎಲ್ಲವೂ ಕಾನೂನಿಗೆ ಅನುಗುಣ ವಾಗಿಯೇ ಇದೆ. ತನಿಖಾಧಿಕಾರಿ ಯಿಂದ ಮುಂಚಿತವಾಗಿಯೇ ತನಿಖೆ ನಡೆಸಿ ವರದಿ ಪಡೆಯ ಬೇಕಾದ ಅಗತ್ಯವಿಲ್ಲ. ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ (ಪಿಸಿ ಕಾಯ್ದೆ) 17ಎ ಅಡಿ ಖಾಸಗಿ ವ್ಯಕ್ತಿಯೂ ತನಿಖೆ ನಡೆಸು ವಂತೆ ಕೋರಿ ಅನುಮತಿ ಪಡೆಯ ಬಹುದು’ ಎಂದು ಪೀಠ ಹೇಳಿದೆ.
- ‘ಫಿರ್ಯಾದುದಾರರು ತಮ್ಮ ದೂರನ್ನು ಮುಂದುವರಿಸಲು ಮತ್ತು ಇದಕ್ಕೆ ಪೂರಕವಾಗಿ ರಾಜ್ಯಪಾಲರಿಂದ ಮಂಜೂರಾತಿ ಪಡೆಯಲು ಸಮರ್ಥ ರಾಗಿದ್ದಾರೆ. ಸಾಮಾನ್ಯ ಸಂದರ್ಭಗಳಲ್ಲಿ, ಸಚಿವ ಸಂಪುಟದ ಸಲಹೆಯಂತೆ ಕಾರ್ಯ ನಿರ್ವಹಿಸುವುದು ರಾಜ್ಯಪಾಲರ ಕರ್ತವ್ಯ. ಆದಾಗ್ಯೂ, ವಿಶೇಷ ಸಂದರ್ಭಗಳಲ್ಲಿ ಅವರು ಸ್ವತಂತ್ರ ನಿರ್ಧಾರವನ್ನು ತೆಗೆದುಕೊಳ್ಳಬಹುದು’ ಎಂದು ವಿವರಿಸಿದೆ.
- ವಾಸ್ತವವಾಗಿ ಪಿಸಿ ಕಾಯ್ದೆಯ ಕಲಂ 17ಎ ಅಡಿಯಲ್ಲಿ ಅನುಮತಿ ಕಡ್ಡಾಯವಾಗಿದೆ. ಆದರೆ, ಖಾಸಗಿ ದೂರುದಾರರ ವಿಚಾರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತ–2023ರ (ಬಿಎನ್‌ಎಸ್‌ಎಸ್) ಕಲಂ 200 ಅಥವಾ 223ರ ಅಡಿಯಲ್ಲಿ ಪೊಲೀಸ್ ಅಧಿಕಾರಿಯೇ ಅನುಮತಿ ಕೋರ ಬೇಕೆನ್ನುವ ಅಗತ್ಯ ಎಲ್ಲಿಯೂ ಇಲ್ಲ. ಖಾಸಗಿ ದೂರುದಾರರೂ ರಾಜ್ಯಪಾಲರಿಂದ ಮಂಜೂ ರಾತಿ ಪಡೆಯಬಹುದು. ಅಂತಹ ಅನುಮತಿಯನ್ನು ಪಡೆಯುವುದು ದೂರುದಾರರ ಕರ್ತವ್ಯ’ ಎಂದು ನ್ಯಾಯಪೀಠ ಹೇಳಿದೆ.
ಏನಿದು ವಿವಾದ?
- ‘ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಒಡೆತನದ್ದು ಎನ್ನಲಾದ ಕೃಷಿ ಭೂಮಿಯನ್ನು ಮುಡಾ ವಶ ಪಡಿಸಿಕೊಂಡು ಅದಕ್ಕೆ ಬದಲು 14 ನಿವೇಶನ ಪ್ರಮುಖ ಜಾಗದಲ್ಲಿ ಹಂಚಿಕೆ ಮಾಡಿದೆ’ ಎನ್ನುವುದು ವಿವಾದದ ಕೇಂದ್ರ ಬಿಂದು.
- ‘ಪರಿಹಾರ ರೂಪದಲ್ಲಿ ನೀಡಲಾದ ನಿವೇಶನಗಳ ಹಂಚಿಕೆ ಪ್ರಕ್ರಿಯೆಯೇ ಅಕ್ರಮದಿಂದ ಕೂಡಿದೆ. ಇಡೀ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ನವರು ಪ್ರಭಾವ ಬೀರಿರುವುದು ಕಂಡು ಬಂದಿದೆ’ ಎಂದು ಆರೋಪಿಸಲಾದ ಮೂರು ಖಾಸಗಿ ದೂರುಗಳನ್ನು ರಾಜ್ಯಪಾಲರಿಗೆ ಸಲ್ಲಿಸಲಾಗಿತ್ತು. ಇವುಗಳನ್ನು ಆಧರಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಕಲಂ (ಪಿಸಿ ಕಾಯ್ದೆ) 17ಎ ಅಡಿ ತನಿಖೆ ನಡೆಸಲು 2024ರ ಆಗಸ್ಟ್ 17ರಂದು ಮಂಜೂರಾತಿ ನೀಡಿದ್ದರು. ‘ರಾಜ್ಯಪಾಲರ ಆದೇಶವನ್ನು ರದ್ದುಪಡಿಸಬೇಕು’ ಎಂದು ಕೋರಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.
ತನಿಖಾ ಪ್ರಕ್ರಿಯೆ ಹೇಗೆ?
- ಖಾಸಗಿ ದೂರುಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆಗೆ ಸ್ವೀಕರಿಸಿ, ದೂರುಗಳನ್ನು ಪರಿಶೀಲಿಸ ಬಹುದು. ಅವುಗಳಲ್ಲಿರುವ ಆರೋಪ ಕುರಿತು ತನಿಖೆಗೆ ಆದೇಶಿಸಬಹುದು
- ಇವು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್‌ಗಳ ಅಡಿ ನೀಡಲಾದ ದೂರುಗಳಾಗಿರುವ ಕಾರಣ, ಇಂತಹ ಪ್ರಕರಣಗಳ ತನಿಖೆಗಾಗಿಯೇ ಅಸ್ತಿತ್ವದಲ್ಲಿರುವ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಪ್ರಕರಣ ವರ್ಗಾವಣೆ ಆಗುತ್ತದೆ
- ವಿಶೇಷ ನ್ಯಾಯಾಲಯವು ನೀಡುವ ಆದೇಶದ ಅನುಸಾರ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಬೇಕಾಗುತ್ತದೆ
- ಮೂರು ಖಾಸಗಿ ದೂರುಗಳಿಗೆ ಸಂಬಂಧಿಸಿ ಒಂದೇ ಎಫ್‌ಐಆರ್ ದಾಖಲಿಸಿ, ತನಿಖೆ ಆರಂಭಿಸಬೇಕಾಗುತ್ತದೆ
ತನಿಖೆಯ ಬಿಸಿ
- ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಪ್ರಭಾವವಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಸೇರಿ ಐವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿ’ ಎಂದು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ಆದೇಶಿಸಿದೆ.
- ‘ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ–1973ರ (ಸಿಆರ್‌ಪಿಸಿ) ಕಲಂ 156 (3)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕು’ ಎಂದು ಸೂಚಿಸಿದರು.
ಮುಂದಿನ ಪ್ರಕ್ರಿಯೆ ಏನು?
- ‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ಐಆರ್ ದಾಖಲಿಸುವ ಮುನ್ನ ಪೊಲೀಸರು ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸಬೇಕಾಗುತ್ತದೆ. ಆದರೆ, ಈ ಪ್ರಕರಣದಲ್ಲಿ ಪ್ರಾಥಮಿಕ ವಿಚಾರಣೆಯ ಪ್ರಮೇಯವೇ ಬರುವುದಿಲ್ಲ. ಯಾಕೆಂದರೆ ನ್ಯಾಯಾಲಯವೇ ಎಫ್‌ಐಆರ್ ದಾಖಲಿಸಿ ಎಂದಿರುವುದರಿಂದ ಎಫ್‌ಐಆರ್ ಮಾಡಲೇಬೇಕಾಗುತ್ತದೆ. ಈ ಸಮಯದಲ್ಲಿ ಸಾಕ್ಷ್ಯಾಧಾರ ಕಂಡುಬಂದರೆ ಆರೋಪಿಗಳನ್ನು ಬಂಧಿಸಬಹುದಾಗಿದೆ. ಈ ವೇಳೆ ಆರೋಪಿಗಳು ನಿರೀಕ್ಷಣಾ ಜಾಮೀನನ್ನೂ ಕೋರಬಹುದು’
Comments (0)